ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ.
ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26)
ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು,
ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ.
ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಬಸಕ್ಕೆ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಸಾವು ಸಾವನಪ್ಪಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.