ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.
ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು.
ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.