ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು, ಪತಿ, ಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡ್ತಿದ್ದಾರೆ. ಸೋಫೀಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿದ್ದಾರೆ.
2015 ರಲ್ಲಿ ಮ್ಯಾರೇಜ್ ಆಗಿರೋ ತಾಜುದ್ದೀನ್ ಸೋಫೀಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸುಫೀಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸಧ್ಯ ಸೋಫೀಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನಿ ಬಾಗೇವಾಡಿ ಸಹ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.