ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!

ಹಾವೇರಿ: ಬ್ಯಾಡಗಿ ತಾಲೂಕಿ‌ನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

error: Content is protected !!