ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ ಮೆರವಣಿಗೆ ಇತ್ತು. ಡಿಜೆ ನೋಡುವುದಕ್ಕೆ ಹೊರಟಿದ್ದ ಬಾಲಕರು ಮಸಣಕ್ಕೆ ಸೇರಿದ್ದಾರೆ.