ಬೆಳಗಾವಿಯಲ್ಲಿ ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾಲೋಪ ವಿಚಾರವಾಗಿ, ಬೆಳಗಾವಿ ಕ್ಯಾಂಪ್ ಠಾಣೆ ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತುಗೊಂಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅಮಾನತು ಆದೇಶ ಹೊರಡಿಸಿದ್ದಾರೆ.
ಬೆಳಗಾವಿಯಲ್ಲಿ ಇತ್ತಿಚೆಗೆ ನಡೆದಿದ್ದ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಸಮಾವೇಶದಲ್ಲಿ, ಬೆಲೆ ಏರಿಕೆ ಹಾಗೂ ಸಂವಿಧಾನ ಬಚಾವೋ ಸಮಾವೇಶದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದರು.
ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಸಿಟ್ಟಾಗಿ ರೇಗಾಡಿದ್ದರು. ಹೀಗಾಗಿ, ಭದ್ರತಾ ಲೋಪದ ಕಾರಣ ಕೊಟ್ಟು ಸೇವೆಯಿಂದ ಸಿಪಿಐಯವರನ್ನು ಕಮೀಷನರ್ ಅಮಾನತ್ತು ಮಾಡಿದ್ದಾರೆ.
ಅಂದಹಾಗೆ, ಈಗಾಗಲೇ ಇದೇ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿತ್ತು. ಈಗ ಭದ್ರತಾ ಲೋಪ ಹಿನ್ನೆಲೆ ಸಿಪಿಐ ಅಲ್ತಾಪ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.