ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ

ಕಾರವಾರ: ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರೆ ಯೋಜನೆಗಳ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯಲ್ಲಿನ ಎಲ್ಲಾ ಅಂಗನವಾಡಿಗಳ ವ್ಯಾಪ್ತಿಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಆರೋಗ್ಯ ಇಲಾಖೆಯ ಮೂಲಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ಒಳಪಡಿಸುವ ಮೂಲಕ ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲದಂತೆ ಎಚ್ಚರಿಕೆ ವಹಿಸಿ, ಈ ಮಕ್ಕಳು ಸಂಪೂರ್ಣ ಆರೋಗ್ಯವಂತರಾಗುವವರೆಗೆ ನಿಗಾ ವಹಿಸುವುದರ ಜೊತೆಗೆ ಎಲ್ಲಾ ಮಕ್ಕಳ ಸಂಪೂರ್ಣ ವಿವರಗಳನ್ನು ಇಟ್ಟುಕೊಳ್ಳಬೇಕು ಎಂದರು.

ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!

ಜಿಲ್ಲೆಯಲ್ಲಿ ಕಳೆದ ತ್ರೆಮಾಸಿಕದಲ್ಲಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದ 85 ಮಕ್ಕಳು ಇದ್ದು ಪ್ರಸ್ತುತ 62 ಇದ್ದಾರೆ, ಈ ಎಲ್ಲಾ ಮಕ್ಕಳು ಸಂಪೂರ್ಣ ಗುಣಮುಖ ಆಗುವವರೆಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ಒದಗಿಸಬೇಕು , ವೈದ್ಯಾಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ನಿರಂತರವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ತಪಾಸಣೆ ನಡೆಸಬೇಕು ಎಂದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ಕುರಿತಂತೆ, ಪ್ರಸ್ತುತ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಅಂಗನವಾಡಿಗಳ ವ್ಯಾಪ್ತಿಯ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮತ್ತು ತಹಸೀಲ್ದಾರ್‌ಗಳೊಂದಿಗೆ ಚರ್ಚಿಸಿ, ಆ ಭಾಗದಲ್ಲಿ ಸರಕಾರಿ ಜಮೀನು ಲಭ್ಯವಿರುವ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಿ ಎಂದರು.

ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಪಾವತಿಸುವ ಸಹಾಯಧನವನ್ನು ನಿಗಧಿತ ಅವಧಿಯಲ್ಲಿ ಪಾವತಿಸುವಂತೆ ಮತ್ತು ಬ್ಯಾಂಕ್ ಖಾತೆಯಲ್ಲಿ ಕಂಡು ಬರುವ ಸಮಸ್ಯೆಗಳ ಕುರಿತಂತೆ ಲೀಡ್ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ವಿಶೇಷ ಕ್ಯಾಂಪ್ ಆಯೋಜಿಸಿ ಬ್ಯಾಂಕಿಂಗ್ ಕುರಿತ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.

ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಕುರಿತಂತೆ ಗ್ರಾಮ ಮಟ್ಟದಲ್ಲಿ ನಿಗಧಿತವಾಗಿ ಸಭೆಗಳನ್ನು ನಡೆಸಬೇಕು, ಗ್ರಾಮ ಮತ್ತು ತಾಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಕಾವಲು ಸಮಿತಿಗಳು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಸಾಂತ್ವನ ಯೋಜನೆಯ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಅಗತ್ಯ ನೆರವು, ಆಪ್ತ ಸಮಾಲೋಚನೆ ಒದಗಿಸುವುದರ ಜೊತೆಗೆ ಅವರಿಗೆ ಸ್ವಯಂ ಉದ್ಯೋಗ ಮತ್ತು ಕೌಶಲ್ಯ ತರಬೇತಿಗಳನ್ನು ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಒದಗಿಸಬೇಕು, ಸಾಂತ್ವನ ಯೋಜನೆಯ ಕುರಿತಂತೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು, ತಾಲೂಕು ಮಹಿಳಾ ಸ್ವ ಸಹಾಯ ಸಂಘದ ಸಭೆಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥಪಡಿಸಿ ನೊಂದ ಮಹಿಳೆಗೆ ನ್ಯಾಯ ಒದಗಿಸುವಂತ ತಿಳಿಸಿದ ಜಿಲ್ಲಾಧಿಕಾರಿಗಳು, ಸಖಿ ಒನ್ ಸ್ಟಾಫ್ ಸೆಂಟರ್ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ವೈದ್ಯಕೀಯ, ಪೊಲೀಸ್,ಕಾನೂನು ಸೇರಿದಂತೆ ಎಲ್ಲಾ ರೀತಿಯ ಸಮಗ್ರ ನೆರವು ಒದಗಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರುಪಾಕ್ಷ ಗೌಡ ಪಾಟೀಲ್ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.

error: Content is protected !!