ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..!  ಬಾಂಬ್ ದಾಳಿ, 37 ಜನ ಬಚಾವ್..!!

ಕಾರವಾರ: ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಗೀಡಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತ ರಕ್ಷಣೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಸುರಕ್ಷಿತ ರಕ್ಷಣೆ, ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ಸುರಕ್ಷಿತ ರಕ್ಷಣೆ, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರ ರಕ್ಷಣೆ, ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಇಡೀ ಬೀಚ್‌ನಲ್ಲಿದ್ದ ಸಾವಿರಾರು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ, ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ವಿಕಿರಣ ಸೋರಿಕೆಯ ಮುನ್ನೆಚ್ಚರಿಕಾ ಕ್ರಮವಾಗಿ ಹರ್ಟುಗಾ ಗ್ರಾಮದ ಎಲ್ಲಾ ನಾಗರೀಕರ ಸ್ಥಳಾಂತರ.

ಇದೆಲ್ಲಾ ನೈಜ ಘಟನೆಯಲ್ಲ.. ಯುದ್ದದಂತಹ ತುರ್ತು ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೇಂದ್ರ ಗೃಹಸಚಿವಾಲಯದ ನಿರ್ದೇಶನದಂತೆ ಸೋಮವಾರ ಕಾರವಾರದ ವಿವಿಧ ಭಾಗಗಳಲ್ಲಿ ಕೈಗೊಂಡ “ಆಪರೇಷನ್ ಅಭ್ಯಾಸ್” ನಾಗರೀಕ ರಕ್ಷಣಾ ಮಾದರಿಯ ಅಣಕು ಕಾರ್ಯಚರಣೆ ಚಟುವಟಿಕೆಗಳು..

ಅಣುವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ..!
ಬಿಣಗಾದ ಗ್ರಾಸಿಂ ಇಂಡಸ್ಟ್ರೀಸ್‌ನಲ್ಲಿ ಕಟ್ಟಡ ಕುಸಿದು ಬಿದ್ದಾಗ ಸ್ಥಳದಲ್ಲಿದ್ದ ಜನರನ್ನು ರಕ್ಷಣೆ ಮಾಡುವ ಬಗ್ಗೆ ಕೈಗಾ ಅಣು ವಿದ್ಯುತ್ ಕೇಂದ್ರದ ಒಳಗೆ ಬೆಂಕಿ ಅವಘಡದಿಂದ ರಕ್ಷಣೆ ಮಾಡುವ ಅಣಕು ಕಾರ್ಯಾಚರಣೆ, ಅಮದಳ್ಳಿಯ ನೇವಲ್ ಬೇಸ್ ಬಳಿ ಸಿವಿಲಿಯನ್ ಕಾಲೋನಿಯಲ್ಲಿ ಅಗ್ನಿ ಅವಘಡದಿಂದ ರಕ್ಷಣಾ ಕಾರ್ಯಾಚರಣೆ, ಕಾರವಾರದ ರವೀಂದ್ರನಾಥ ಠಾಗೋರ ಬೀಚ್‌ನಲ್ಲಿ ಬಾಂಬ್ ದಾಳಿಯಿಂದ ಸಾರ್ವಜನಿಕರನ್ನು ರಕ್ಷಣೆ ಮಾಡುವ ಅಣಕು ಕಾರ್ಯಾಚರಣೆ ಮತ್ತು ಅಣು ವಿಕಿರಣದಿಂದ ಸಾರ್ವಜನಿಕರ ರಕ್ಷಣೆ ಕುರಿತಂತೆ ಹರ್ಟುಗಾ ಗ್ರಾಮದಿಂದ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ, ರೈಲ್ವೆ ನಿಲ್ದಾಣದಲ್ಲಿನ ಬಾಂಬ್ ದಾಳಿಯಿಂದ ಸಾರ್ವಜನಿಕರನ್ನು ರಕ್ಷಣೆ ಮಾಡುವ ಅಣಕು ಕಾರ್ಯಾಚರಣೆಗಳನ್ನು ಅತ್ಯಂತ ಯಶಸ್ವಿಯಾಗಿ ಕೈಗೊಳ್ಳಲಾಯಿತು.

ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ

ಕಾರ್ಯಾಚರಣೆಯಲ್ಲಿ ನೌಕಾಪಡೆ, ಕೋಸ್ಟ್ ಗಾರ್ಡ್, ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ, ಎನ್.ಡಿ.ಆರ್.ಎಫ್, ಪೊಲೀಸ್, ಕರಾವಳಿ ಪೊಲೀಸ್, ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಗೃಹ ರಕ್ಷಕ ದಳ, ಕಂದಾಯ, ಆರೋಗ್ಯ, ಮೀನುಗಾರಿಕೆ, ನಗರಸಭೆ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಎನ್.ಎಸ್.ಎಸ್., ಎನ್.ಸಿ.ಸಿ. ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು.

ಬ್ಲ್ಯಾಕ್ ಔಟ್..!
ಸಂಜೆ 7.30 ರಿಂದ 8 ಗಂಟೆಯ ಅವಧಿಯಲ್ಲಿ ಬ್ಲ್ಯಾಕ್ ಔಟ್ ಕಾರ್ಯಾಚರಣೆ ನಡೆಸಲಾಗಿದ್ದು, ಈ ಅವಧಿಯಲ್ಲಿ ಸೈರನ್ ಮೊಳಗಿದ ತಕ್ಷಣ ಕಾರವಾರ ನಗರಪ್ರದೇಶದಲ್ಲಿ ಸಾರ್ವಜನಿಕರು ತಮ್ಮ ಮನೆಗಳ ಕಿಟಕಿ, ಬಾಗಿಲು ಮುಚ್ಚಿ, ವಿದ್ಯುತ್ ದೀಪಗಳನ್ನು ಬಂದ್ ಮಾಡಿ ಕತ್ತಲು ಮಾಡಿದರು. ವಾಹನ ಸವಾರರು ತಾವು ಚಲಾಯಿಸುತ್ತಿದ್ದ ವಾಹನಗಳನ್ನು ಬಂದ್ ಮಾಡಿ ಹೆಡ್ ಲೈಟ್ ಆರಿಸಿ ರಸ್ತೆಯ ಪಕ್ಕದಲ್ಲಿ ಸುರಕ್ಷಿತವಾಗಿ ನಿಂತು ಬ್ಲ್ಯಾಕ್ ಔಟ್ ಕಾರ್ಯಾಚರಣೆಗೆ ಸಹಕಾರ ನೀಡಿದರು. ಕೈಗಾ ಟೌನ್‌ಶಿಪ್ ನಲ್ಲಿ ಕೂಡಾ ಬ್ಲ್ಯಾಕ್ ಔಟ್ ಕಾರ್ಯಾಚರಣೆ ಕೈಗೊಳ್ಳಲಾಯಿತು. ಬ್ಲಾಕ್ ಔಟ್ ಕಾರ್ಯಾಚರಣೆಗಾಗಿ ಒಟ್ಟು 13 ಸೈರನ್‌ಗಳನ್ನು ಅಳವಡಿಸಲಾಗಿತ್ತು.

ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ

ಅಣಕು ಕಾರ್ಯಚರಣೆ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಕೆ,ಲಕ್ಷ್ಮೀಪ್ರಿಯಾ, ಬಿಣಗಾದ ಗ್ರಾಸಿಂ ಇಂಡಸ್ಟ್ರೀಸ್‌ನಲ್ಲಿ ಕಟ್ಟಡ ಕುಸಿದಿದೆ ಎಂದು ಡಿಸಿ ಕಂಟ್ರೋಲ್ ರೂಮ್‌ಗೆ ಸಂಜೆ 4 ಗಂಟೆಗೆ ಕರೆ ಮೂಲಕ ಮಾಹಿತಿ ತಿಳಿಯುತ್ತದೆ ತಕ್ಷಣ ಅಲ್ಲಿಗೆ ರಕ್ಷಣೆ ತಂಡವನ್ನು ಹಾಗೂ ಅಂಬ್ಯುಲೇನ್ಸ್ ವ್ಯವಸ್ಥೆ ಮಾಡಿ ಅಲ್ಲಿಂದ ಸಾರ್ವಜನಿಕರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಗಾಯಗೊಂಡವರಿಗೆÀ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು ಈ ಅಣುಕು ಕಾರ್ಯಚರಣೆಗೆ 38 ನಿಮಿಷ ಸಮಯವನ್ನು ತೆಗೆದುಕೊಳ್ಳಲಾಯಿತು.

ಕೈಗಾ ಅಣು ವಿದ್ಯುತ್ ಕೇಂದ್ರದ ಒಳಗೆ ಬೆಂಕಿ ಅವಘಡವಾಗಿರುವ ಬಗ್ಗೆ ಕಂಟ್ರೋಲ್ ರೂಮ್‌ಗೆ ಸಂಜೆ 4.15 ಗಂಟೆಗೆ ಕರೆ ಮೂಲಕ ಮಾಹಿತಿ ತಿಳಿಯಿತು. ತಕ್ಷಣ ಅಗ್ನಿ ಶಾಮಕ ದಳದವರನ್ನು, ಪೊಲೀಸ್, ಕಂದಾಯ ಇಲಾಖೆ ಹಾಗೂ ವೈದ್ಯರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅವಘಡದಿಂದ ಸಾರ್ವಜನಿಕರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕಳುಹಿಸಲು ಈ ಅಣಕು ಕಾರ್ಯಚರಣೆಗೆ 38-40 ನಿಮಿಷ ಕಾಲಾವಕಾಶವನ್ನು ತೆಗೆದುಕೊಳ್ಳಲಾಯಿತು ಎಂದರು.

ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ

ಅಣು ವಿಕಿರಣ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆ ಕುರಿತಂತೆ ಹರ್ಟುಗಾ ಗ್ರಾಮದಿಂದ ಸಾರ್ವಜನಿರನ್ನು ಸಿದ್ದರದ ಬಿ.ಸಿ.ಎಂ ಹಾಸ್ಟೇಲ್ ಸ್ಥಳಾಂತರಿಸುವ ಕುರಿತು ಅಣಕು ಕಾರ್ಯಚರಣೆ ಮಾಡಲಾಯಿತು ಈ ಕಾರ್ಯಾಚರಣೆ ಮಾಡಲು 1 ಗಂಟೆ 20 ನಿಮಿಷ ಕಾಲಾವಕಾಶವನ್ನು ತೆಗೆದುಕೊಳ್ಳಲಾಯಿತು.
ಅಮದಳ್ಳಿಯ ನೇವಲ್ ಬೇಸ್ ಬಳಿ ಸಿವಿಲಿಯನ್ ಕಾಲೋನಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಕುರಿತು ಪೊಲೀಸ್ ಕಂಟ್ರೋಲ್ ರೂಂ ಗೆ ಸಂಜೆ 5 ಗಂಟೆಗೆ ಕರೆ ಮೂಲಕ ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ದಳದವರು, ತಹಸೀಲ್ದಾರ್, ವೈದ್ಯರ ತಂಡ, ನೇವಿ ಹಾಗೂ ಕೋಸ್ಟ್ ಗಾರ್ಡ್ರವರು ಎಲ್ಲರೂ ಸೇರಿ ಅಣಕು ಕಾರ್ಯಾಚರಣೆ ಮಾಡಲಾಗಿದೆ.

ಬೈತಕೂಲ್‌ನಲ್ಲಿ ತುರ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿತ್ತು. ಈ ಅಣಕು ಕಾರ್ಯಾಚರಣೆ 43 ನಿಮಿಷ ಕಾಲಾವಕಾಶ ತೆಗೆದುಕೊಳ್ಳಲಾಯಿತು. ಈ ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ, ಪೊಲೀಸ್ ಕಂಟ್ರೊಲ್ ರೂಂ ನ್ನು ಅತ್ಯಂತ ಪರಿಣಾಮಕಾರಿಯಗಿ ವ್ಯವಸ್ಥಿತಗೊಳಿಸಿದ್ದು ಮಾತ್ರವಲ್ಲದೇ ಒಂದು ಶಾಡೋ ಕಂಟ್ರೋಲ್ ರೂಂ ಕೂಡಾ ತೆರೆಯಲಾಗಿತ್ತು. ತುರ್ತು ಸಂದರ್ಭದಲ್ಲಿ ಅನುಕೂಲವಾಗುವಂತೆ ಹಾಟ್ ಲೈನ್ ಸಂಪರ್ಕಗಳನ್ನೂ ಕೂಡಾ ಪಡೆಯಲಾಗಿತ್ತು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಇದ್ದರು.

error: Content is protected !!