ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು,  ಪ್ರತಿಭಟನೆ..!

ಬೆಳಗಾವಿ : ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆರೋಪಿಗಳ ಬಂಧನಕ್ಕಾಗಿ ತಂಡ ರಚನೆ ‌ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

ಸೋಮವಾರ ಪ್ರಾರ್ಥನೆ ಮಾಡಲು ಮಸೀದಿಗೆ ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದು ಕಂಡುಬಂದಿದೆ. ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ. ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಬೆಳಗಾವಿ ಪೊಲೀಸ್ ಆಯುಕ್ತ ಇಯಾಡಾ ಮಾರ್ಟಿನ್ ಮತ್ತು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ಸ್ಥಳಕ್ಕೆ ಧಾವಿಸಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆವರಣದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿಟಿಯು ಬಳಿಯ ಬೆಳಗಾವಿ-ಗೋವಾ ರಸ್ತೆಯನ್ನು ತಡೆಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಮುನ್ನೆಚ್ಚರಿಕೆಯಾಗಿ ವೃತ್ತಕ್ಕೆ ಹೋಗುವ ರಸ್ತೆಗಳನ್ನು ನಿರ್ಬಂಧಿಸಲಾಯಿತು.

error: Content is protected !!