ಕಾರವಾರ: ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸಲು, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಈ ಕಾರ್ಯಕ್ರಮದಲ್ಲಿ ಪರಿಹಾರ ಪಡೆದುಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!