ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ಆನಂದ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ.

ಆನಂದ್ ಗುರೂಜಿ ದೂರಿನ ಮೇರೆಗೆ ಪೊಲೀಸರು ಇಬ್ಬರ ವಿರುದ್ಧ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಪೊಲೀಸ್‌ ಠಾಣೆಯಲ್ಲಿ ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಆನಂದ ಗುರೂಜಿ ಅವರು ವೀಡಿಯೊ ಹಾಗೂ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದು, ಆದರೂ, ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿ, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ ಎಂದು ಆನಂದ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ.

error: Content is protected !!