ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ

ಕಾರವಾರ: ಗೌರವಾನ್ವಿತ ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಆಯೋಗದ ನಿರ್ದೇಶನದಂತೆ ಮೇ. 25 ರವರೆಗೆ ಮನೆ ಮನೆ ಸಮೀಕ್ಷೆ ಕಾರ್ಯವನ್ನು ವಿಸ್ತರಿಸಲಾಗಿದೆ ಹಾಗೂ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕಾರ್ಯವನ್ನು ಮೇ.26 ರಿಂದ 28 ರವರೆಗೆ ಮರು ನಿಗಧಿಪಡಿಸಲಾಗಿದೆ.

ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು.

ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಕಂಟ್ರೋಲ್ ರೂಂ ಮತ್ತು ಸಹಾಯವಾಣಿ ತೆರೆಯಲಾಗಿದ್ದು 08382-229857, 9483511015 ನ್ನು ಹಾಗೂ ರಾಜ್ಯ ಮಟ್ಟದ ಸಹಾಯವಾಣಿ ಸಂ: 080-22634300 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!