ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.
ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ ಕಿಡಿಗೇಡಿಗಳು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ‘NEXT YOU WILL KILL’ ಎಂದು ಬರೆದು ಜೀವ ಬೆದರಿಕೆ ಹಾಕಿದ್ದ ಆರೋಪಿ, ವಾಟ್ಸಾಪ್ ಕಾಲ್ ಹಾಗೂ ವೀಡಿಯೊ ಕಾಲ್ ಮೂಲಕವೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.
ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ, Next You ಎಂದು ಬೆದರಿಕೆ ಹಾಕಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.