ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಸಮಾರಂಭವು ಮೇ.17 ರಂದು ಬೆಳಗ್ಗೆ 9 ಗಂಟೆಗೆ ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ.
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್. ವಿ.ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ.ಉಳ್ವೇಕರ ಹಾಗೂ ಪುರಸಭೆ ಅಧ್ಯಕ್ಷ ಅಲ್ತಾಫ್ ಕರೂರಿ ಮೊಹಿದ್ದೀನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ. ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.