ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!

ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ, ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ, ಸರಕಾರದಿಂದ ದೊರೆಯುವು ಸೌಲಭ್ಯಗಳನ್ನು ಮಂಜೂರು ಮಾಡಬೇಕು.

ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು, ಅವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ನಾನು ಕೂಡಾ ಕಾರ್ಯನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದುರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.

ಅವರು ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನಭೋಗ ಸಭಾ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ಪರಿಹಾರಕ್ಕಾಗಿ ಕಛೇರಿಗಳಿಗೆ ಬಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಕ್ಷಣ ಸ್ಪಂದಿಸಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಜನ ಸ್ಪಂದನ ಕಾರ್ಯಕ್ರಮ ಕೇವಲ ಕಾಟಾಚಾರದ ಕಾರ್ಯಕ್ರಮವಲ್ಲ, ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವ ಕಾರ್ಯಕ್ರಮವಾಗಿದ್ದು, ಇಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ, ಆದ್ಯತೆಯಲ್ಲಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ

ಜಿಲ್ಲೆಯಲ್ಲಿ ಪ್ರಸ್ತುತ 6 ನೇ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದುವರೆಗಿನ ಜನ ಸ್ಪಂದನಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಮುಂದಿನ ದಿನಗಳಲ್ಲಿ ಪ್ರತಿಯೊಂದು ತಾಲೂಕಿನಲ್ಲಿ ಜಿಲ್ಲಾಮಟ್ಟದ ಜನಸ್ಪಂದನಾ ಕಾರ್ಯಕ್ರಮ ಮಾಡಬೇಕೆಂದು ಉದ್ದೇಶವಿದೆ.

ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರದ ಜಿಲ್ಲಾ ಕೇಂದ್ರ ಹಾಗೂ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು, ಅವರು ಇರುವ ಕಡೆಗಳಿಗೆ ಎಲ್ಲಾ ಅಧಿಕಾರಿಗಳೊಂದಿಗೆ ತೆರಳಿ ಅವುಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!

ಜನ ಸ್ಪಂದನಾ ಕಾರ್ಯಕ್ರಮದ ಮೂಲಕ 5 ದಶಕಗಳಲ್ಲಿ ಪರಿಹಾರ ಸಿಗದೇ ಇರುವ ಸಮಸ್ಯೆಗಳಿಗೆ ಕೂಡ ಸೂಕ್ತ ಪರಿಹಾರ ದೊರಕಿಸಿಕೊಡಲಾಗಿದೆ. ಅಧಿಕಾರಿಗಳ ಬಳಿ ಯಾವುದೇ ಮಧ್ಯವರ್ತಿಗಳು ಇಲ್ಲದೇ ನೇರವಾಗಿ ಹೋಗಿ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವ ವ್ಯವಸ್ಥೆ ಜಿಲ್ಲೆಯಲ್ಲಿದೆ ಎಂದರು.

error: Content is protected !!