ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ.
ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಪಿಎಸ್ಐ ಬಸವರಾಜ್ ಮಬನೂರರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಅಂದಹಾಗೆ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಪರವಾದ ನಿಷ್ಟೆ, ಸಾಧನೆಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗ್ತಿದೆ. ಹೀಗಾಗಿ, ಉತ್ತರ ಕನ್ನಡದ ಎಸ್ಪಿ ನಾರಾಯಣ್ ಎಂ. ಹಾಗೂ ಹಳಿಯಾಳ ಪಿಎಸ್ಐ ಬಸವರಾಜ್ ಮಬನೂರು ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ.