Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ
ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಅಂತಾ ಮುನ್ಸೂಚನೆ ನೀಡಲಾಗಿದೆ.

ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!

ಹೀಗಾಗಿ, ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ. ದಟ್ಟಣೆ. ದುರ್ಬಲ ಸಂಚಾರ ಮರದ ಕೊಂಬೆಗಳನ್ನು ಕಿತ್ತುಹಾಕುವ ಸಾಧ್ಯತೆಯಿದೆ ಮನೆಯೊಳಗೆ ಇರಿ ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಅಂತಾ ಸೂಚಿಸಿರೋ ಹವಾಮಾನ ಇಲಾಖೆ ಈ ಸಂದರ್ಭಗಳಲ್ಲಿ ಕೆಲವು ಎಚ್ಚರಿಕೆಗಳನ್ನು ಪಾಲಿಸುವಂತೆ ಸೂಚಿಸಿದೆ.

ಮರಗಳ ಕೆಳಗೆ ಆಶ್ರಯ ಪಡೆಯದಂತೆ, ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಬೇಕು. ಎಲೆಕ್ನಿಕೆಟ್/ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣವೇ ಆನ್‌ಪ್ಲಗ್ ಮಾಡಿ. ಈ ಸಂದರ್ಭದಲ್ಲಿ ಜಲಮೂಲಗಳಿಂದ ಹೊರಬರಬೇಕು, ವಿದ್ಯುಚ್ಛಕ್ತಿಯನ್ನು ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಬೇಕು. ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಅಂತಾ ಸೂಚಿಸಿದ್ದಾರೆ.

error: Content is protected !!