Gold Rate Today: ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಬಂಗಾರದ ಬೆಲೆಗಳು ಇಂದು ಮತ್ತೆ ದಿಢೀರ್‌ ಕುಸಿತ ಕಂಡಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ. ವಿಶೇಷವಾಗಿ ಮಹಿಳೆಯರು ಮದುವೆ, ಹಬ್ಬಗಳಂತಹ ಶುಭ ಸಮಾರಂಭಗಳಲ್ಲಿ ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಹೀಗಾಗಿ ಭಾರತದಲ್ಲಿ ಎಲ್ಲ ಕಾಲಕ್ಕೂ ಚಿನ್ನದ ಬೇಡಿಕೆ ಹೆಚ್ಚಿನ ಮಟ್ಟದಲ್ಲೇ ಇರುತ್ತದೆ. ಆ ದರೆ, ಚಿನ್ನದ ಬೆಲೆ ಇತ್ತೀಚೆಗೆ ತೀವ್ರ ಏರಿಳಿತಕ್ಕೆ ಒಳಗಾಗುತ್ತಿದೆ. ನಿನ್ನೆ ಸೋಮವಾರ ಏರಿಕೆ ದಾಖಲಿಸಿದ್ದ ಬಂಗಾರದ ಬೆಲೆಗಳು, ಇಂದು ಮಂಗಳವಾರ ದಿಢೀರ್‌ ಕುಸಿತ ಕಂಡಿದೆ. ಕಳೆದ 10 ದಿನಗಳಲ್ಲಿ ಸರಾಸರಿ ಚಿನ್ನದ ಬೆಲೆಗಳು ಇಳಿಕೆಯಾಗಿವೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ.

ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ‌ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!

ಈ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಕಾಡುತ್ತದೆ. ಇದಲ್ಲದೆ ಡಾಲರ್‌ ಸೂಚ್ಯಂಕದಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ತೀವ್ರ ಏರಿಳಿತಕ್ಕೆ ಒಳಗಾಗುತ್ತಿದೆ. ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ.

ಬೆಂಗಳೂರಲ್ಲಿ ಚಿನ್ನದ ಬೆಲೆ..!
ಬೆಂಗಳೂರಲ್ಲಿ ಇಂದು ಮಂಗಳವಾರ ಬಂಗಾರದ ಬೆಲೆಯಲ್ಲಿ ದಿಢೀರ್‌ ಕುಸಿತ ಕಂಡುಬಂದಿದೆ. 22 ಕ್ಯಾರೆಟ್ ಆಭರಣದ ಚಿನ್ನದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ ₹450 ಇಳಿಕೆಯಾಗಿ ₹87,100ರಲ್ಲಿ ವಹಿವಾಟು ನಡೆಸುತ್ತಿದೆ. 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ ₹490 ಇಳಿಕೆಯಾಗಿದ್ದು, ₹95,020ರಲ್ಲಿ ವಹಿವಾಟು ನಡೆಸುತ್ತಿದೆ.

ಬೆಳ್ಳಿ ಬೆಲೆ ₹1000 ಇಳಿಕೆ..!
ಚಿನ್ನದ ಬೆಲೆ ಜೊತೆಗೆ ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದೆ. ಬೆಂಗಳೂರಲ್ಲಿ ಇಂದು ಮಂಗಳವಾರ ಪ್ರತಿ 1 ಕೆಜಿ ಬೆಳ್ಳಿ ಬೆಲೆಯಲ್ಲಿ ₹1000 ಇಳಿಕೆಯಾಗಿದ್ದು, ₹97,000 ದಂತೆ ವಹಿವಾಟು ನಡೆಸುತ್ತಿದೆ. ಹೈದರಾಬಾದ್‌ನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 1.08 ಲಕ್ಷದಲ್ಲಿ ವಹಿವಾಟು ನಡೆಸುತ್ತಿವೆ. ಬೆಂಗಳೂರಿಗೆ ಹೋಲಿಸಿದರೆ, ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ ಹೆಚ್ಚಿದೆ.

ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!

error: Content is protected !!