4pm Rain Update News: ಬೆಂಗಳೂರು:
ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ.

ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ
ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಅಂತಾ ಮುನ್ಸೂಚನೆ ನೀಡಲಾಗಿದೆ.