ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!

Heavy rain Hill collapses: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಲವು ಅವಾಂತರಳಿಗೆ ಕಾರಣವಾಗುತ್ತಿದೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತಿದ್ದು , ಈ ಹಿಂದೆ ಗುಡ್ಡವನ್ನು ತುಂಡರಿಸಿ ರಸ್ತೆ ಮಾಡಲಾಗಿತ್ತು.

ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಸ್ತೆ ಬದಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರಕ್ಕೆ‌ ಅಡಚಣೆಯಾಗಿದೆ. ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರೋದ್ರಿಂದ ಸಂಚಾರ ಕಿರಿಕಿರಿ ಆಗಿದೆ. ರಸ್ತೆ ಮೇಲಿನ ಮಣ್ಣು, ಕಲ್ಲು ತೆರವು ಕಾರ್ಯ ನಡೆದಿದೆ.

error: Content is protected !!