ZP CEO Meeting News: ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆಗಾಲವು ಈ ವರ್ಷ ಬೇಗ ಶುರುವಾಗಿದ್ದು. ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೂ ನೀರಿನ ಹಂಚಿಕೆ ಸರಿಯಾಗಿ ಮಾಡಬೇಕು, ಪೈಪ್‌ಲೈನ್‌ಗಳ ಕೆಲಸಗಳು ಸಮರ್ಪಕವಾಗಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
ತಾಲೂಕಿನ ಎಲ್ಲಾ ಇಂಜಿನೀಯರ್‌ಗಳು, ಸಹಾಯಕ ಇಂಜಿನೀಯರ್‌ಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಸರ್ವೇ, ನೀರಿನ ತೆರಿಗೆಯನ್ನು ಸಂಗ್ರಹಿಸುವಂತೆ, ಮತ್ತು ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕು. ನೀರಿನ ಪೈಪ್ ಮತ್ತು ನೀರಿನ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸಬೇಕು. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ 24×7 ಕುಡಿಯವ ನೀರಿನ ಸರಬರಾಜು ವ್ಯವಸ್ಥೆಯನ್ನು ಮಾಡುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕೆಲಸಗಳನ್ನು ಮಾಡಬೇಕು ಎಂದರು.
ಹೆಸ್ಕಾಂ, ಪಂಚಾಯತಗಳು, ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಸಂಪರ್ಕವನ್ನು ಇಟ್ಟುಕೊಳ್ಳಬೇಕು. ಕೆಲಸದ ಸ್ಥಳಕ್ಕೆ ಭೇಟಿ ನೀಡಿದ ಪ್ರತಿಯೊಬ್ಬರು ಜಿ.ಪಿ.ಎಸ್ ಫೋಟೋ ಗಳನ್ನು ಕಚೇರಿಯ ಗುಂಪಿನಲ್ಲಿ ಹಾಕಬೇಕು. ಆರೋಗ್ಯ ಇಲಾಖೆಯಿಂದಲೂ ನೀರಿನ ಗುಣಮಟ್ಟದ ಬಗ್ಗೆ ಮಾಹಿತಿಯನ್ನು ನೀಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪಪರಿಣಾಮ ಬೀರದಂದತೆ ನೋಡಿಕೊಳ್ಳಬೇಕು. ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
ನೀರಿನ ಪೈಪ್, ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸಬೇಕು ಎಂದರು.
ಚಿನ್ನದ ಬೆಲೆ ಒಂದೇ ದಿನ ₹2400 ಏರಿಕೆ, ಬೆಳ್ಳಿ ₹3000 ಜಿಗಿತ; ಆಭರಣ ಖರೀದಿದಾರರಿಗೆ ಬಿಗ್ ಶಾಕ್..!
ಇದೇ ವೇಳೆ ಭಯೋತ್ಪಾದನಾ ವಿರೋಧಿ ದಿನಾಚರಣೆ ನಿಮಿತ್ತ ಸಿಇಓ ಈಶ್ವರ್ ಕಾಂದೂ ಅವರ ನೇತೃತ್ವದಲ್ಲಿ ಎಲ್ಲ ಶಾಖಾ ಮುಖ್ಯಸ್ಥರು ಹಾಗೂ ಅಧಿಕಾರಿ ಸಿಬ್ಬಂದಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರು, ಜಿಲ್ಲಾ ಮುಖ್ಯ ಲೆಕ್ಕಾಧಿಕಾರಿ ಆನಂದ ಸಾ ಹಬೀಬ್. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.