ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!

ED Raid News:ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇಂದು, ಬುಧವಾರ ಬೆಳಗ್ಗೆಯಿಂದ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಆರಂಭಿಸಿದ್ದಾರೆ. 9 ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

error: Content is protected !!