Crime News:ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮಡೆನೂರು ಮನು (Madenuru Manu)ನನ್ನು ಪೊಲೀಸರು ಬಂಧಿಸಿದ್ದಾರೆ.ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಅರೆಸ್ಟ್ ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿತ್ತು. ಇದಾದ ಬಳಿಕ ನಟ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಕಿರುತೆರೆ ನಟನನ್ನು ಬಂಧಿಸಿ ಪೊಲೀಸರು ಕರೆತರುತ್ತಿದ್ದಾರೆ ಎಂದು ಹೇಳಲಾಗಿದೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು (Madenur Manu) ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟನ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಮನುವನ್ನು ಬಂಧಿಸಲಾಗಿದೆ