Business News:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ರಾಯಭಾರಿಯಾಗಿರಲಿದ್ದಾರೆ.
ಮೈಸೂರು ಸ್ಯಾಂಡ್ ಸೋಪ್‌ಗೆ ತನ್ನದೇ ಆದ ಇತಿಹಾಸವಿದೆ. ಇದು ಗ್ರಾಹಕರ ಮೆಚ್ಚಿನ ಸೋಪುಗಳಲ್ಲಿ ಒಂದಾಗಿದ್ದು, ಬಹುಬೇಡಿಕೆಯ ಸೋಪ್ ಆಗಿದೆ. ಇದೀಗ ಹೊಸ ಗ್ರಾಹಕರು ಹಾಗೂ ಯುವ ಸಮೂಹವನ್ನು ಸೆಳೆಯು ಉದ್ದೇಶದಿಂದ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯನ್ನಾಗಿ ನಟಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ.
ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್ ಉತ್ಪನ್ನಗಳ ನೂತನ ರಾಯಭಾರಿ ತಮನ್ನಾ ಭಾಟಿಯಾ ಅವರಿಗೆ 6.2 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ.
ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್‌ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಕೆಲವರು ಅಪಸ್ವರ ಎತ್ತಿರುವುದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.
ಕೆಎಸ್‌ಡಿಎಲ್ ಕಳೆದ ಸಾಲಿನಲ್ಲಿ 1,785 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಇದರಲ್ಲಿ ಕರ್ನಾಟಕದ ಪಾಲು ಶೇ. 18ರಷ್ಟಿದೆ. ಉಳಿದದ್ದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದೆ. ಸಂಸ್ಥೆಯ ವಹಿವಾಟನ್ನು 2030ರ ವೇಳೆಗೆ 5,000 ಕೋಟಿ ರೂಪಾಯಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಂಡಿದ್ದೇವೆ.
ಇದು ಮಾರುಕಟ್ಟೆ ಪರಿಣತರ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.
ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆ, ಕಿಯಾರಾ ಅಡ್ವಾಣಿ ಅವರನ್ನೂ ಪರಿಗಣಿಸಿದ್ದೆವು. ಆದರೆ ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8 ಕೋಟಿ ಫಾಲೋವರ್ಸ್ ಹೊಂದಿ, ಉಳಿದವರಿಗಿಂತ ಮುಂದಿದ್ದಾರೆ. ಹೀಗಾಗಿ ಅವರನ್ನೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.