Rain Alert News uttar Kannada:
ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಿಗೆ (ದಿನಾಂಕ 24.05.2025 ರಿಂದ 27.05.2025 ವರೆಗೆ) ರೆಡ್ ಅಲರ್ಟ್ ಇದ್ದು ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40 ಕೀ.ಮೀ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚನೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಹೈ ವೇವ್ ಅಲರ್ಟ್..!
ಉತ್ತರ ಕನ್ನಡ, ಜಿಲ್ಲೆಯ ಕರಾವಳಿ ಗುಂಟ ಮಾಜಾಳಿಯಿಂದ ಭಟ್ಕಳದವರೆಗೆ ಹೈ ಟೈಡ್ ಎಚ್ಚರಿಕೆ ನೀಡಲಾಗಿದೆ. ಮೇ 24 ರಂದು ಬೆಳಗ್ಗೆ 8.30 ರಿಂದ ರಾತ್ರಿ 8.30 ರ ವರೆಗೆ 2.7-3.3 ಮೀಟರ್ ವ್ಯಾಪ್ತಿಯ ಎತ್ತರದ ಅಲೆಗಳು ಏಳಲಿವೆ ಎಂದು ಮುನ್ಸೂಚನೆ ಇದ್ದು, ಸಮುದ್ರ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು..
ಸೈಲ್ ಸರ್ಚ್ ಅಲರ್ಟ್..!
ಉತ್ತರ ಕನ್ನಡ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದ ವರೆಗೆ ಅಲೆಗಳ ಉಬ್ಬರ ಎಚ್ಚರಿಕೆ ನೀಡಲಾಗಿದೆ. ಮೇ 22 ರಂದು ಸಂಜೆ 5:30 ರಿಂದ ಮೇ 23 ರಂದು ಸಂಜೆ 5:30 ರವರೆಗೆ 13.0 – 16.0 ಸೆಕೆಂಡುಗಳ ಅವಧಿಯಲ್ಲಿ 1.0-1.6 ಮೀ ಎತ್ತರದ ಅಲೆಗಳು ಏಳಬಹುದು ಎಂದು ಮುನ್ಸೂಚನೆ ನೀಡಲಾಗಿದ್ದು ದೋಣಿಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ನೂಚಿಸಲಾಗಿದೆ.
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24×7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧೀಕೃತ/ವದಂತಿಗಳಿಗೆ ಕಿವಿಗೊಡಬಾರದೆಂದು ವಿನಂತಿಸಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ. ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು . ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ. ಸೂಕ್ತ ಕಟ್ಟಡದಲ್ಲಿ ಅಶ್ರಯ ಪಡೆಯುವುದು.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು.
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ಗುಡುಗು ಸಿಡಿಲು/ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು. ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಮುಂಜಾಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.
ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ. ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು, ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು.
ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು. ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯಗೋಡೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿಗೆ ಮಾಹಿತಿ ನೀಡುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆಮಾಡಬಹುದು. 24×7 ಕಂಟ್ರೋಲ್ ರೂಂ ದೂ.ಸಂ.08382-229857, ವಾಟ್ಸಾಪ್ ಸಂಖ್ಯೆ. 9483511015 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.