ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.

ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ ರಸ್ತೆಯಲ್ಲಿ ಬ್ಯಾರೀಕೆಡ್ ಅಳವಡಿಸಿ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ತಾತ್ಕಾಲಿಕ ವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬದಲಿ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ.

error: Content is protected !!