Women skill training: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆ/ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದ್ದು, ಪ್ರಸ್ತುತ ಗ್ರಾಮೀಣ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ.
ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯಲಾಗದೇ, ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಒದಗಿಸಬಲ್ಲ ಕೌಶಲ್ಯ ತರಬೇತಿಗಳ ಕೊರತೆ ಇದ್ದು, ಸ್ವ-ಉದ್ಯೋಗಕ್ಕೆ ಕೈ ಹಾಕಿದರೆ ಬಂಡವಾಳದ ಕೊರತೆ ಹಾಗೂ ನಷ್ಠ್ಟವಾಗುತ್ತದೆಂಬ ಭಯದಿಂದ ಯಾವುದೇ ಉದ್ಯೋಗವಿಲ್ಲದೆ ಆರ್ಥಿಕವಾಗಿ ಸಬಲರಾಗದೇ ಬಡತನದಲ್ಲೇ ಜೀವನ ಸಾಗಿಸುವಂತ ಸನ್ನಿವೇಶವಿದೆ ಮತ್ತು ಸ್ಥಳೀಯವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಕೊರತೆಯೂ ಸಹ ಇದೆ.
Women skill training:
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸುವ ಮೂಲಕ ಮಹಿಳೆಯರಲ್ಲಿ ಅಡಗಿರುವ ಸಾಮರ್ಥ್ಯವನ್ನು ವೃದ್ಧಿಸಿ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿ ಆರ್ಥಿಕವಾಗಿ ಸಬಲರಾಗುವುದರ ಜೊತೆ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬಹುದಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಆತ್ಮ ಸ್ಥೆöÊರ್ಯದ ವ್ಯದ್ಧಿಯಾಗುವುದರ ಜೊತೆಗೆ ಆರ್ಥಿಕ ಸ್ವಾವಲಂಬನೆಯು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ.
ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳAತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳAತೆ ಒಟ್ಟು 100 ಕೇಂದ್ರಗಳನ್ನು ಆರಂಭಸಲಾಗುತ್ತಿದ್ದು, ಪ್ರಾಯೋಗಿಕವಾಗಿ 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆ ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಕೇಂದ್ರಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ.
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
ಈ ಯೋಜನೆಯಲ್ಲಿ ಸಂಜೀವಿನಿಯಡಿ ರಚಿಸಿರುವ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರ ಆಕಾಂಕ್ಷೆ ಮತ್ತು ಆಸಕ್ತಿಗನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಿ ಸ್ವ-ಉದ್ಯೋಗದ ಅವಕಾಶ ಕಲ್ಪಿಸಲಾಗುವುದು ಮತ್ತು ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಉದ್ಯಮಶೀಲರನ್ನಾಗಿಸಿ, ಸ್ವ-ಉದ್ಯೋಗಕ್ಕೆ ಉತ್ತೇಜನ ನೀಡಲಾಗುವುದು. ಮಹಿಳೆಯರು ಸ್ಥಳೀಯ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ಪನ್ನಗಳನ್ನು ಉತ್ಪಾದಿಸುವುದರ ಮೂಲಕ ಅವರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಉತ್ತಮವಾಗಿಸಲು ಪ್ರೋತ್ಸಾಹಿಸುವುದು ಮಾತ್ರವಲ್ಲದೇ ಗ್ರಾಮೀಣ ಮಹಿಳೆಯರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶ ಹೊಂದಲಾಗಿದೆ.
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
ತರಬೇತಿ ನೀಡುವ ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಸರ್ಕಾರದ ಕೌಶಲ್ಯ ಅಭಿವೃದ್ಧಿ ನಿಗಮ, ರುಡ್‌ಸೆಟಿ/ಆರ್‌ಸೆಟಿ ಪ್ರತಿಷ್ಠಿತ ಸರ್ಕಾರೇತರ ಬೆಂಬಲ ಸಂಸ್ಥೆಗಳ ಮೂಲಕ ತರಬೇತಿ ನೀಡಿ, ಬ್ಯಾಂಕ್‌ಗಳೊಂದಿಗೆ ಸಂಪರ್ಕ ಏರ್ಪಡಿಸಿ, ಅನುಸರಣೆ ಮತ್ತು ಬೆಂಬಲ ನೀಡಿ ಮಹಿಳೆಯರಿಗೆ ಸ್ವ-ಉದ್ಯೋಗ ಪ್ರಾರಂಭಿಸುವಂತೆ ಪ್ರೇರೆಪಿಸಲಾಗುವುದು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಡಿ, ಕುಮಟಾ ತಾಲೂಕಿನ ಮಿರ್ಜಾನ, ಹಳಿಯಾಳ ತಾಲೂಕಿನ ಭಾಗವತಿ, ಮುಂಡಗೋಡ ತಾಲೂಕಿನ ಬಾಚಣಿಕೆ ಗ್ರಾಮ ಪಂಚಾಯತ್ ಗಳಲ್ಲಿ ಮಹಿಳಾ ಕೌಶಲ್ಯ ಅಭಿವೃಧ್ದಿ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ಕೇಂದ್ರದಲ್ಲಿ ಪ್ರತಿ ತಂಡದಲ್ಲಿ ಕನಿಷ್ಠ 15 ರಿಂದ 30 ಮಂದಿಯಂತೆ, ಆಸಕ್ತ 300 ಮಹಿಳೆಯರಿಗೆ ತರಬೇತಿ ನೀಡಲಾಗುವುದು. ಈ ಕೇಂದ್ರದಲ್ಲಿ ಕಸೂತಿ, ಟೈಲರಿಂಗ್, ಬ್ಯಾಗ್ ತಯಾರಿಕೆ, ಮಣ್ಣಿನ ಗೃಹ ಅಲಂಕಾರ ವಸ್ತುಗಳು, ರೊಟ್ಟಿ ತಯಾರಿಕೆ, ಮಸಾಲೆ ಪದಾರ್ಥಗಳ ತಯಾರಿಕೆ ಮುಂತಾದ ಆದಾಯೋತ್ಪನ್ನ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಪ್ರಸ್ತುತ ಪ್ರಾಯೋಗಿಕವಾಗಿ ಜಿಲ್ಲೆಯ 3 ಗ್ರಾಮ ಪಂಚಾಯತ್ ಗಳಲ್ಲಿ ಈ ಯೋಜನೆ ಆರಂಭಗೊಂಡಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಆರಂಭಗೊಳ್ಳುವ ನಿರೀಕ್ಷೆಯಿದೆ. ಈ ತರಬೇತಿಯ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರು ಉತ್ಪಾದಕ ಚಟುವಟಿಕೆಗಳನ್ನು ಕೈಗೊಂಡು ಆರ್ಥಿಕವಾಗಿ ಸಬಲರಾಗಿ, ಸ್ವಾವಲಂಬಿಗಳಾಗಬಹುದು ಅಂತಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಈಶ್ವರ ಕಾಂದೂ ತಿಳಿಸಿದ್ದಾರೆ.