ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!

Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಇಮ್ತಿಯಾಜ್ ಪಟೇಲ್, ಆಸೀಫ್ ಪಟೇಲ್, ಹಾಗು ಸಿಮ್ರಾನ್ ಪಟೇಲ್ ಗೆ ಧಾರವಾಡಕ್ಕೆ ಕಳಿಸಲಾಗಿದೆ. ಭೀಮರಾವ್ ಕೆಂಭಾವಿ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

error: Content is protected !!