ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ. ರಾಜ್ಯಗಳು ‘1 ರಾಜ್ಯ, 1 ಅಂತಾರಾಷ್ಟ್ರೀಯ ಪ್ರವಾಸಿ ಸ್ಥಳ’ ಪರಿಕಲ್ಪನೆಯ ಅಡಿ ತಮ್ಮ ರಾಜ್ಯದ ಕನಿಷ್ಠ ಒಂದು ಪ್ರವಾಸಿ ಸ್ಥಳವನ್ನಾದರೂ ಅಂತಾರಾಷ್ಟ್ರೀಯ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ರಾಜ್ಯಗಳು ವಿಕಸಿತವಾದಾಗ ದೇಶ ವಿಕಸಿತವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಶನಿವಾರ ಮಾತನಾಡಿದರು. ‘2024ರ ವಿಕಸಿತ ಭಾರತಕ್ಕೆ ವಿಕಸಿತ ರಾಜ್ಯ’ ಈ ಬಾರಿಯ ಆಯೋಗದ ಸಭೆಯ ಮುಖ್ಯ ವಿಷಯವಾಗಿತ್ತು.
ಇದನ್ನೂ ಓದಿ👉ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
ರಾಜ್ಯಗಳು ವಿಕಸಿತವಾಗಲಿ..!
‘ದೇಶದಲ್ಲಿ ಅಭಿವೃದ್ಧಿಗೆ ವೇಗ ನೀಡುವ ಅಗತ್ಯವಿದ್ದು, ಈಗಾಗಲೇ ನಾವು ಅದರ ವೇಗ ಹೆಚ್ಚಿಸಿದ್ದೇವೆ. ವಿಕಸಿತ ಭಾರತ ಎಲ್ಲಾ ಭಾರತೀಯರ ಗುರಿ. ಪ್ರತಿ ರಾಜ್ಯವೂ ವಿಕಸಿತವಾದಾಗ ಭಾರತದ ವಿಕಾಸ ಸಾಧ್ಯವಾಗುತ್ತದೆ. ವಿಕಸಿತ ಭಾರತವು 140 ಕೋಟಿ ಭಾರತೀಯರ ಆಕಾಂಕ್ಷೆ’ ಎಂದರು.