Karwar Health News:
ಕಾರವಾರ; ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಅಕ್ರಮವಾಗಿ ಗರ್ಭ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಪ್ರಕರಣಗಳು ನಡೆಯದಂತೆ ನಿರಂತರವಾಗಿ ನಿಗಾವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ👉ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್‌ ಯೋಜನೆಗಳಿವು; ಇಲ್ಲಿದೆ ಪೂರ್ಣ ವಿವರ..!

ಜಿಲ್ಲೆಯಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 77 ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಆರೋಗ್ಯ ಅಧಿಕಾರಿಗಳು ದಿಢೀರ್ ದಾಳಿಗಳನ್ನು ನಡೆಸಿ, ಈ ಸೆಂಟರ್‌ಗಳು ಕಾನೂನು ಪ್ರಕಾರ ಎಲ್ಲಾ ಆದೇಶಗಳನ್ನು ಪಾಲಿಸಿ, ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ತಪಾಸಣೆ ನಡೆಸಬೇಕು, ಈ ಎಲ್ಲಾ ಕೇಂದ್ರಗಳಿಗೆ ಪ್ರತೀ ಕೇಂದ್ರಗಳಿಗೆ ವಾರ್ಷಿಕ ಕನಿಷ್ಠ 4 ಬಾರಿ ಭೇಟಿ ನೀಡಿ ತಪಾಸಣೆ ನಡೆಸಬೇಕು, ತಪಾಸಣಾ ವರದಿಯಲ್ಲಿ ತಪಾಸಣೆಯ ಸಂಪೂರ್ಣ ವಿವರಗಳನ್ನು ದಾಖಲಿಸಬೇಕು ಎಂದರು.

ಇದನ್ನೂ ಓದಿ👉ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!

ತಪಾಸಣೆ ಸಂದರ್ಭದಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಅಕ್ರಮ ಗರ್ಭ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕುರಿತು ಎಚ್ಚರಿಕೆ ಫಲಕಗಳನ್ನು ಅಳವಡಿಸಿರುವ ಬಗ್ಗೆ ಮತ್ತು ಪ್ರತಿ ರೋಗಿಯ ಕುರಿತ ಸಂಪೂರ್ಣ ದಾಖಲೆಗಳನ್ನು ಇಟ್ಟಿರುವ ಬಗ್ಗೆ ಪರಿಶೀಲನೆ ನಡೆಸಬೇಕು, ರೋಗಿಗಳಿಂದ ನಿಗಧಿತ ದರದಂತೆ ಶುಲ್ಕವನ್ನು ಪಡೆದಿರುವ ಬಗ್ಗೆ ಪರಿಶೀಲಿಸಿ, ಅಕ್ರಮ ಗರ್ಭ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಇದನ್ನೂ ಓದಿ👉18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌..!

ಜಿಲ್ಲೆಯಲ್ಲಿ 2023 ರಂತೆ ಲಿಂಗಾನುಪಾತದ ಪ್ರಮಾಣ 974 ಇದ್ದು ಇದು ಇನ್ನಷ್ಟು ಉತ್ತಮಗೊಳ್ಳಬೇಕು. ಒಂದು ವರ್ಷದ ಅವಧಿಯಲ್ಲಿ ಸಂಭವಿಸಿರುವ ಗರ್ಭಪಾತ ಪ್ರಕರಣಗಳ ಕುರಿತಂತೆ ಮಾಹಿತಿ ಸಂಗ್ರಹಿಸಿ, ಈ ಗರ್ಭಪಾತಕ್ಕೆ ಕಾರಣಗಳು ಮತ್ತು ಅದನ್ನು ತಡೆಯಬಹುದಾದ ಕ್ರಮಗಳ ಬಗ್ಗೆ ವರದಿ ಸಿದ್ದಪಡಿಸುವ ಮೂಲಕ, ಮುಂದಿನ ದಿನಗಳಲ್ಲಿ ಲಿಂಗಾನುಪಾತ ಪ್ರಮಾಣವನ್ನು ಇನ್ನಷ್ಟು ಉತ್ತಮಪಡಿಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ👉ಸೊಳ್ಳೆಗಳು ಕೆಲವು ವ್ಯಕ್ತಿಗಳತ್ತ ಮಾತ್ರ ಹೆಚ್ಚು ಆಕರ್ಷಿತವಾಗುತ್ತವೆ ಯಾಕೆ ? ಅಧ್ಯಯನ ಹೇಳುವುದು ಏನೆಂದರೆ..!

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತರಕರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಿನಿ ಬೋರಕರ, ಜಿಲ್ಲಾ ಸಲಹಾ ಸಮಿತಿ ಸದಸ್ಯ ಶ್ರೀಕಾಂತ ಮಹಾದೇವ ನಾಯ್ಕ್, ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯಿಕ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!