Fake doctor News:
ಕಾರವಾರ: ಜಿಲ್ಲೆಯ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ನಕಲಿ ಕ್ಲಿನಿಕ್‌ಗಳು ಮತ್ತು ವೈದ್ಯರ ವಿರುದ್ದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೆಪಿಎಂಇ ಅಡಿಯಲ್ಲಿ ನೋದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ👉ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..!

ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ 3 ಕ್ಲಿನಿಕ್‌ಗಳ ಮೇಲೆ ಈಗಾಗಲೇ FIR ದಾಖಲಿಸಲಾಗಿದ್ದು, 14 ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದೆ, 17 ನಕಲಿ ಕ್ಲಿನಿಕ್‌ಗಳಿಗೆ ನೋಟಿಸ್ ನೀಡಲಾಗಿದ್ದು, ಇದರಲ್ಲಿ ಸೂಕ್ತ ದಾಖಲೆ ನೀಡಿದ ಕ್ಲಿನಿಕ್‌ಗಳನ್ನು ಮುಚ್ಚಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಅಗತಯವಿದ್ದಲ್ಲಿ ಈ ಕಾರ್ಯಕ್ಕೆ ಪೊಲೀಸ್ ನೆರವು ಪಡೆಯುವಂತೆ ಸೂಚಿಸಿದರು.

ಇದನ್ನೂ ಓದಿ👉ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!

ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಅನಧಿಕೃತ ಕ್ಲಿನಿಕ್‌ಗಳು ವೈದ್ಯರು ಕಾರ್ಯನಿರ್ವಹಿಸದಂತೆ ಎಚ್ಚರವಹಿಸಬೇಕು, ಅನಧಿಕೃತ ಎಂದು ಕಂಡು ಬಂದಲ್ಲಿ, ತಪಾಸಣೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿ, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಕೆಲವು ವೈದ್ಯರು ತಾವು ಪಡೆದಿರುವ ವೈದ್ಯಕೀಯ ಪದ್ದತಿಯ ಬದಲು ಇತರೇ ವೈದ್ಯಕೀಯ ಪದ್ದತಿಯಲ್ಲಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ತಾಲೂಕು ವೈದ್ಯಾಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು, ಅಂತಹ ವೈದ್ಯರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಇದನ್ನೂ ಓದಿ👉ಸೊಳ್ಳೆಗಳು ಕೆಲವು ವ್ಯಕ್ತಿಗಳತ್ತ ಮಾತ್ರ ಹೆಚ್ಚು ಆಕರ್ಷಿತವಾಗುತ್ತವೆ ಯಾಕೆ ? ಅಧ್ಯಯನ ಹೇಳುವುದು ಏನೆಂದರೆ..!

ಇದೇ ಸಂದರ್ಭದಲ್ಲಿ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿಗಳ ಸುರಕ್ಷತೆಗೆ ಜಿಲ್ಲಾ ಕಾರ್ಯಪಡೆಯನ್ನು ರಚಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಆಸ್ಪತ್ರೆಗಳಲ್ಲಿ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿಗಳ ಅಳವಡಿಕೆ, ಆಸ್ಪತ್ರೆಯ ಆವರಣದಲ್ಲಿ ವಿದ್ಯುತ್ ಬೆಳಕಿನ ಪ್ರಮಾಣದ ಹೆಚ್ಚಳ, ಭದ್ರತಾ ಸಿಬ್ಬಂದಿಗಳ ನೇಮಕ, ಆಸ್ಪತ್ರೆಗಳಿಗೆ ಸೂಕ್ತ ಪ್ರವೇಶ ಮತ್ತು ನಿರ್ಗಮನ ದ್ವಾರ, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಹೆಚ್ಚಿನ ಸುರಕ್ಷತೆ, ಎಚ್ಚರಿಕೆ ಗಂಟೆ ಒತ್ತಿದ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ತುರ್ತು ಸಂದೇಶ ರವಾನೆಯಾಗುವಂತಹ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ👉18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌..!

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತರಕರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಿನಿ ಬೋರಕರ, ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯಿಕ್ ಎಲ್ಲಾ ತಾಲೂಕುಗಳು ಆರೋಗ್ಯಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

error: Content is protected !!