Police News Karwar:
ಕಾರವಾರ: ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಅಮೀತ್ ಸಿಂಗ್ ಹೇಳಿದರು.

ಅವರು ಸೋಮವಾರ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಂಚಾರ ಜಾಗೃತಿ ಕೆಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅವುಗಳನ್ನು ತಡೆಯುವ ನಿಟ್ಟಿನಲ್ಲಿ, ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಿ ಜಾಗೃತೆಯಿಂದ ವಾಹನ ಚಾಲಾಯಿಸಬೇಕು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಸಂಚಾರ ಜಾಗೃತಿ ಕೇಂದ್ರಕ್ಕೆ ಸಾರ್ವಜನಿಕರನ್ನು ಕರೆತಂದು ಮಾಹಿತಿ ಮತ್ತು ಅರಿವು ಮೂಡಿಸಬೇಕು. ರಸ್ತೆ ಸಂಚಾರ ನಿಯಮಗಳ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮವನ್ನು ಮಾಡಬೇಕು. ಸಾಮಾಜಿಕ ಜಾಲತಾಣ, ಟಿವಿ, ಪತ್ರಿಕೆಗಳಲ್ಲಿ ಇದರ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದರು.

ಇದನ್ನೂ ಓದಿ👉ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!

ಎಲ್ಲಾ ತಾಲೂಕಿನಲ್ಲೂ ಅರಿವು ಕಾರ್ಯಕ್ರಮಗಳನ್ನು ಮಾಡಲೇಬೇಕು. ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘನೆ ಮಾಡಿ ಅಪಘಾತದಿಂದ ಮೃತ ಪಟ್ಟರೆ ಕುಟುಂಬಕ್ಕೆ ಮಾತ್ರವಲ್ಲದೇ ಇಡೀ ಸಮಾಜಕ್ಕೆ ನೋವುಂಟಾಗುತ್ತದೆ.

ಸಂಚಾರ ನಿಯಮಗಳು ಪೊಲೀಸರಿಗೆ ಮಾತ್ರ ಸೀಮಿತವಲ್ಲ ಪ್ರತಿಯೊಬ್ಬರಿಗೂ ಸಂಬಂಧಿಸಿದ್ದು, ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ ಅನಾಹುತಗಳನ್ನು ತಡೆಯಲು ಪೊಲೀಸ್‌ರೊಂದಿಗೆ ಸಹಕರಿಸುವಂತೆ ಹೇಳಿದರು.

ಇದನ್ನೂ ಓದಿ👉ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!

ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ಮಾತನಾಡಿ, ಇಲ್ಲಿನ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಅರಿವು, ಶಿಕ್ಷಣ, ಜಾಗೃತಿಯನ್ನು ನೀಡಲಾಗುತ್ತಿದೆ. ಆರ್.ಟಿ.ಓ ವತಿಯಿಂದ ವಾಹನ ಕಂಡೀಷನ್ ಕುರಿತು ಹಲವು ಕಾರ್ಯಕ್ರಮ ಮಾಡಲಾಗುತ್ತದೆ ಎಂದರು.

ಪತ್ರಿ ವರ್ಷ ಜಿಲ್ಲೆಯಲ್ಲಿ 300 ರಿಂದ 400 ಕ್ಕೂ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ, ಪ್ರತಿಯೊಬ್ಬರು ವಾಹನ ಸಂಚಾರ ಮಾಡುವಾಗ ರಸ್ತೆ ಸಂಚಾರ ಸುರಕ್ಷತಾ ನಿಯಮಗಳನ್ನು ಪಾಲನೇ ಮಾಡಿದಲ್ಲಿ ಅಪಘಾತಗಳು ಸಂಭವಿಸದಂತೆ ತಡೆಯಬಹುದು.

ಇದನ್ನೂ ಓದಿ👉18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌..!

ಪ್ರತಿ ಶುಕ್ರವಾರ ಸಂಚಾರಿ ಜಾಗೃತಿ ಕೇಂದ್ರದಲ್ಲಿ ಚಾಲಕರು, ವಾಹನ ತರಬೇತುದಾರರು, ಶಾಲಾ–ಕಾಲೇಜು ವಿದ್ಯಾರ್ಥಿಗಳನ್ನು ಕರೆತಂದು ರಸ್ತೆ ಸಂಚಾರ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಲಾಗುವುದು. ಮದ್ಯಪಾನ ಸೇವಿಸಿ ವಾಹನಗಳನ್ನು ಚಲಾಯಿಸುವರಿಗೆ ದಂಡ ವಿಧಿಸುವುದು ಮಾತ್ರ ಅಲ್ಲದೇ ಅವರನ್ನು ಕರೆತಂದು ಕುಡಿದು ವಾಹನ ಚಲಾಯಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ವಿಡಿಯೋ ಪ್ರಸಾರ ಮಾಡಿ ಮಾಹಿತಿ ನೀಡಲಾಗುವುದು. ಈ ಕೇಂದ್ರವು ನಿರಂತರವಾಗಿ ನಡೆಯಲಿದ್ದು, ಇಲ್ಲಿ 24×7 ಸಂಚಾರ ಸುರಕ್ಷತಾ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.

ಇದನ್ನೂ ಓದಿ👉ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಮೂರ್ತಿ, ಡಿ.ವೈ.ಎಸ್.ಪಿ ಗಿರೀಶ್, ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ ದೇವೇಂದ್ರಪ್ಪ , ಆರ್.ಟಿ.ಓ ಅಧಿಕಾರಿ ಅನಿಲ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಖಾನ್, ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಆಟೋ ಚಾಲಕರು, ವಾಹನ ಚಾಲನಾ ತರಬೇತಿದಾರರು ಮತ್ತಿತರರು ಉಪಸ್ಥಿತರಿದ್ದರು.

error: Content is protected !!