Karwar News:ಕಾರವಾರದಲ್ಲಿ, ಮೇ.28 ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024- 25 ನೇ ಸಾಲಿನಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಂಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಕೌಶಲ್ಯಾಭಿವೃದ್ಧಿ Enterprenuership Programme (EP) ತರಬೇತಿ ಹಾಗೂ ಪ್ರವಾಸಿ ತಾಣಗಳಲ್ಲಿ ಸಹಾಯಧನದೊಂದಿಗೆ ಮೊಬೈಲ್ ಕ್ಯಾಂಟೀನ್ ಖರಿದಿಸಲು ಅರ್ಜಿ ಆಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ 2 ಮತ್ತು ಪರಿಶಿಷ್ಟ ಪಂಗಡದ 3 ಅಭ್ಯರ್ಥಿಗಳ ಗುರಿ ಹೊಂದಿದ್ದು, ಅಭ್ಯರ್ಥಿಗಳಿಗೆ ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರವನ್ನು ಜಾರಿಗೊಳಿಸಲಾಗಿರುತ್ತದೆ.
ಅಸಕ್ತ ಅಭ್ಯರ್ಥಿಗಳು 20-45 ವರ್ಷದೊಳಗಿರಬೇಕು, ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜೂ.4 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ, 1ನೇ ಮಹಡಿ, ಕೊಠಡಿ ಸಂಖ್ಯೆ: 24 ಕಾರವಾರ, ದೂರವಾಣಿ ಸಂಖ್ಯೆ: 08382-221172 ಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.