Heavy Rain News:ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನ ಜಿಲ್ಲೆ ಸೇರಿದಂತೆ ಕೆಲ ಜಿಲ್ಲೆ ಗಳಿಗೆಯಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮತ್ತು ಜೋರಾದ ಗಾಳಿಯೊಂದಿಗೆ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಬಳಿ ಭೂಕುಸಿತ ಉಂಟಾಗಿ ಒಂದೇ ದಿನ ನಾಲ್ವರು ಸಾವಿಗೀಡಾಗಿದ್ದಾರೆ. ಗುಡ್ಡ ಕುಸಿದ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವಾಗಿರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.