Lokayukta Raid: ಹಾವೇರಿ ಜಿಲ್ಲೆ ಶಿಗ್ಗಾವ ತಾಲೂಕಿನ ಬಾಡ ಗ್ರಾಮ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ದಾಖಲೆಗಳ ಪರಿಶೀಲನೆ ನಡೆದಿದ್ದಾರೆ.
ಬಾಡ ಗ್ರಾಮ ಪಂಚಾಯಿತಿ ಅಧಿಕಾರಿ ರಾಮಕೃಷ್ಣಪ್ಪ ಗುಡಗೇರಿ ಕಚೇರಿ ಮೇಲೆ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ.
ಇದನ್ನೂ ಓದಿ👉ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?
ಪಿಡಿಓ ರಾಮಕೃಷ್ಣಪ್ಪ ಗುಡಗೇರಿ ಮೇಲೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸದ್ಯ ದಾಖಲಾತಿಗಳ ಪರಿಶೀಲನೆ ಕಾರ್ಯ ನಡೆದಿದ್ದು ಅಕ್ರಮಗಳ ಬಗ್ಗೆ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಲಿದ್ದಾರೆ.