Job News:ಕಾರವಾರ: ರಾಷ್ಟೀಯ ಆರೋಗ್ಯ ಅಭಿಯಾನದ PM-ABHIM ಯೋಜನೆಯಡಿ, ನಮ್ಮ ಕ್ಲಿನಿಕ್ ಕೇಂದ್ರ ಕಾರವಾರ, ಅಂಕೋಲಾ, ಭಟ್ಕಳ, ಹಳಿಯಾಳ, ಮಂಕಿ ಮತ್ತು ಮುಂಡಗೋಡನಲ್ಲಿ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಮಾಸಿಕ ರೂ. 75,000/- ವೇತನ ಅನುಮೋದನೆಯಾಗಿದೆ.

ಆಸಕ್ತ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೊಂದಣಿ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಪ್ರತಿ ದಿನ ಕಛೇರಿ ವೇಳೆಯಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಜಿಲ್ಲಾ ಆರೋಗ್ಯ ಮತ್ತು ಕು.ಕ. ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿಯಲ್ಲಿ ಮೂಲ ದಾಖಲಾತಿಯೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!