Covid News: ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 2,710ಕ್ಕೆ ಏರಿದೆ. ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬಂದಿವೆ.

ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದವಿದೆ.
ಒಂದು ತಿಂಗಳು ನಂತರ ಭಾರತದಲ್ಲಿ ಕೊರೊನಾ ವೈರಸ್‌‍ ಪ್ರಕರಣಗಳು ಹೆಚ್ಚುತ್ತಿವೆ, ಮೇ 25 ಕ್ಕೆ ಕೊನೆಗೊಂಡ ವಾರದಲ್ಲಿ ಸೋಂಕುಗಳು ಐದು ಪಟ್ಟು ಏರಿಕೆಯಾಗಿವೆ. ಮೇ 26 ರಂದು 1,010 ಪ್ರಕರಣಗಳಿದ್ದದ್ದು ಮೇ 30 ರಂದು 2,710 ಪ್ರಕರಣಗಳಿವೆ ಏರಿದೆ.

ಅಂದರೆ ಕೇವಲ ನಾಲ್ಕು ದಿನಗಳಲ್ಲಿ ತ್ವರಿತ ಏರಿಕೆ ಕಂಡುಬಂದಿದೆ ಎಂದು ಸರ್ಕಾರಿ ದತ್ತಾಂಶಗಳು ತೋರಿಸುತ್ತವೆ. ಈ ವರ್ಷದ ಮೊದಲ ಐದು ತಿಂಗಳಲ್ಲಿ ಸಾವಿನ ಸಂಖ್ಯೆ 22 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಎರಡು ಸಾವುಗಳು, ದೆಹಲಿ, ಗುಜರಾತ್, ಕರ್ನಾಟಕ, ಪಂಜಾಬ್ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಸಾವು ಸೇರಿ ಏಳು ಸಾವುಗಳು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

error: Content is protected !!