PUC admission: ಕಾರವಾರ: ಕರ್ನಾಟಕ ಸರ್ಕಾರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ PCMB & PCMC ಸಂಯೋಜನೆಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು.

ಸ್ವೀಕೃತ ಎಲ್ಲಾ ಅರ್ಜಿಗಳನ್ನು ಕ್ರೂಢೀಕರಿಸಿ, ಪ್ರಥಮ ಆಯ್ಕೆ ಪಟ್ಟಿಯನ್ನು ದಿನಾಂಕ:29/05/2025 ರಂದು ಬಿಡುಗಡೆ ಮಾಡಲಾಗಿದಾಗ್ಯೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳ ಕೊರತೆ ಇರುವ ಕಾರಣ ಆ ಸ್ಥಾನಗಳು ಭರ್ತಿ ಆಗದೇ ಇರುವುದರಿಂದ ಉಳಿದಿರುವ ಸ್ಥಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಇದನ್ನೂ ಓದಿ👉ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?

2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಮೊರಾರ್ಜಿ ದೇಸಾಯಿ/ಕಿತ್ತೂರುರಾಣಿ ಚೆನ್ನಮ್ಮ/ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಅನುದಾನಿತ ಶಾಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ತರಗತಿಗೆ ದಾಖಲಾತಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಎಸ್.ಎಸ್.ಎಲ್.ಸಿ ಅಂಕಗಳು ಮತ್ತು ಮೀಸಲಾತಿ ಆಧಾರದ ಮೇಲೆ ಅರ್ಹತಾಪಟ್ಟಿ ತಯಾರಿಸಿ ಪ್ರವೇಶ ನೀಡಲಾಗುವುದು. ತುಂಬಿರುವ ಅರ್ಜಿಯನ್ನು ಜೂನ್ 4 ರೊಳಗಾಗಿ ಅರ್ಜಿ ಪಡೆದಿರುವ ಆಯಾ ವಸತಿ ಕಾಲೇಜುಗಳಿಗೆ ಸಲ್ಲಿಸಬೇಕು.

ಇದನ್ನೂ ಓದಿ👉ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಕಲ್ಲಿ, ಶಿರಸಿ, ಮೊರಾರ್ಜಿ ದೇಸಾಯಿ ಉನ್ನತೀಕರಿಸಿದ ವಸತಿ ಶಾಲೆ, ಕರಗಿನಕೊಪ್ಪ, ಮುಂಡಗೋಡ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಮದನಳ್ಳಿ, ಹಳಿಯಾಳ ಇಲ್ಲಿಂದ ಅರ್ಜಿಯನ್ನು ಪಡೆಯಬಹುದೆಂದು ಜಿಲ್ಲಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!