ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್: ಎಚ್ಚರವಹಿಸಲು,  ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!

Rain Red alert; ಕಾರವಾರ; ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳಿಗೆ (ದಿನಾಂಕ:12.06.2025 ರಿಂದ 14.06.2025 ವರೆಗೆ) ರೆಡ್ ಅಲರ್ಟ್ ಇದ್ದು, ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡoತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹರಾಮಾನ ಪರಿಸ್ಥಿತಿಯ ಕುರಿತಂತೆ 24×7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲಚಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ ಸಾರ್ವಜನಿಕರು ಯಾವುದೇ ಅನಧೀಕೃತ/ವದಂತಿಗಳಿಗೆ ಕಿವಿಗೊಡಬಾರದು.

ಮೇಲೆ ತಿಳಿಸಿದ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

  • ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
  • ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
  • ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು.
  • ಸಾರ್ವಜನಿಕರು, ಮಕ್ಕಳು,ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು.
  • ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು.
  • ಮೇಲಿನ ಅಂಶಗಳನ್ನು ಗುಡುಗು ಸಿಡಿಲು/ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಜೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು.
  • ಸಾರ್ವಜನಿಕರಿಗೆ ಆಗತ್ಯವಿದ್ದಲ್ಲಿ ಮುಂಜಾಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು
  • ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಆದಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು.
  • ಅಗತ್ಯವಿದ್ದಲ್ಲಿ ಈಗಾಗಲೇ ಸಂಬoಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು.
  • ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು.

ಸಾರ್ವಜನಿಕರಿಗೆ ಈ ಮೇಲಿನ ಅಂಶಗಳoತೆ ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯಗೋಡೆ ಕಂಡುಬಂದಲ್ಲಿ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ : 24×7 ಕಂಟ್ರೋಲ್ ರೂಂ-08382-229857, ವಾಟ್ಸಪ್ ನಂ: 9483511015 ದೂರವಾಣಿಗೆ ಮಾಹಿತಿ ನೀಡಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ👉 ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!

error: Content is protected !!