School holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ಇಂದು ಜೂನ್ 12 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ
ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.