ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!

Heavy Rain Alert; ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Heavy Rain Alert;

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಇದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಉತ್ತರ ಕರ್ನಾಟಕ, ಧಾರವಾಡ, ಉಡುಪಿ, ಗದಗ, ದಕ್ಷಿಣ ಕನ್ನಡ, ಹಾವೇರಿ, ರಾಯಚೂರು, ಶಿವಮೊಗ್ಗ, ವಿಜಯನಗರ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಮಂಡ್ಯ, ಬೆಂಗಳೂರು ನಗರ, ರಾಮನಗರ, ಹಾಸನ, ಬಳ್ಳಾರಿ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆ ಸುರಿದಿದೆ.

ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!

ಬೀದರ್‌, ಚಾಮರಾಜನಗರ, ಕೊಡಗು, ತುಮಕೂರು, ವಿಜಯಪುರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಿದ್ದು, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮುಂಗಾರು ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 100-250 ಮಿ.ಮೀ.ಗಳಷ್ಟು ಅತ್ಯಧಿಕ ಮಳೆ ವರದಿಯಾಗಿದೆ.

ಈ ಜಿಲ್ಲೆಗಳಿಗೆ ರೆಡ್‌ ಆಲರ್ಟ್‌..!
ಹವಾಮಾನ ಮುನ್ಸೂಚನೆ ಪ್ರಕಾರ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಲಕ್ಷಣಗಳಿದ್ದು, ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಆಲರ್ಟ್‌ ಘೋಷಿಸಿದೆ. ಉಳಿದಂತೆ ಇತರ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್‌ ಘೋಷಿಸಲಾಗಿದ್ದು, ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತಂಪಾದ ಮೇಲೈ ಗಾಳಿಯಿಂದ ಅಲ್ಲಲ್ಲಿ ಸಾಮಾನ್ಯ ಮಳೆಯಾಗಲಿದೆ.

 

error: Content is protected !!