ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆಯೂ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 17 ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಮುಂಡಗೋಡ ತಾಲೂಕಿನಲ್ಲೂ ನಿರಂತರ ಮಳೆಯಾಗುತ್ತಿದ್ದು, ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಗಳಿಗೆ ರಜೆ ಕೊಡಬಹುದು ಅನ್ನೋ ನಿರಿಕ್ಷೆ ಇತ್ತು. ಆದ್ರೆ, ಮುಂಡಗೋಡ ತಾಲೂಕಾಡಳಿತ ಅದ್ಯಾಕೋ ಏನೋ ಇಲ್ಲಿ ರಜೆಯ ಶಿಫಾರಸು ಮಾಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

error: Content is protected !!