ತಗ್ಗಿದ ಮಳೆರಾಯನ ಅರ್ಭಟ; ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದೆಡೆ ಕಡಿಮೆಯಾದ ಮಳೆ..!

Rain Report; ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ👉 ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಅರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ..!

ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ನಿನ್ನೆ ಎಲ್ಲೆಲ್ಲಿ ಮಳೆಯಾಗಿದೆ..?
ಕಾರವಾರ, ಮುಂಡಗೋಡ, ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ, ಕೊಟ್ಟಿಗೆಹಾರ, ಕಮ್ಮರಡಿ, ಭಾಗಮಂಡಲ, ಹುಂಚದಕಟ್ಟೆ, ಶಿರಾಲಿ, ಕದ್ರಾ, ಸುಳ್ಯ, ಕುಮಟಾ, ಧರ್ಮಸ್ಥಳ, ಬನವಾಸಿ, ಜೋಯಿಡಾ, ಬೆಳ್ತಂಗಡಿ, ಹೊನ್ನಾವರ, ತ್ಯಾಗರ್ತಿ, ಖಾನಾಪುರ್, ಗುತ್ತಲ್, ಆನವಟ್ಟಿ, ಕಳಸ, ವಿರಾಜಪೇಟೆ, ಅಂಕೋಲಾ, ಪುತ್ತೂರ್, ಮೂಡುಬಿದಿರೆ, ಬಂಟವಾಳ, ಸಿದ್ದಾಪುರ, ಮಾಣಿಯಲ್ಲಿ ಗುರುವಾರ ಮಳೆಯಾಗಿದೆ.