ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

 

ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್

ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು.

ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ, ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್‌ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್, ರೋಟರಿ ಪಶ್ಚಿಮ, ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರ ಅಂಕೋಲೆಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಬ್ರಹ್ಮ ಕುಮಾರಿ ಕೇಂದ್ರದ ಕವಿತಾ, ಪತಂಜಲಿ ಯೋಗ ಕೇಂದ್ರದ ಪ್ರೇರಣ ನಾಯ್ಕ ಡಾ. ಅನು ಜಯಪ್ರಕಾಶ್, ಡಾ. ತಾರನಾಥ್ ಎಂ ಹರಿಕಾಂತ, ಎಲ್.ಕೆ ನಾಯ್ಕ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪೊಲೀಸ್ ಸಿಬ್ಬಂದಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿ, ಯೋಗಾಭ್ಯಾಸ ಮಾಡಿದರು.

************

ಕಾರವಾರದಿಂದ ಬಿಣಗಾ ಕಡೆಗೆ ಹೋಗುವ ಸುರಂಗ ಮಾರ್ಗದಲ್ಲಿ ಸಂಚಾರ ನಿಷೇಧ..!

ಕಾರವಾರ; ಕಾರವಾರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ-66 ರ ಕಾರವಾರದಿಂದ ಅಂಕೋಲಾ ಕಡೆಗೆ ಸಾಗಲು ನಿರ್ಮಿಸಿದ ಸುರಂಗ ಮಾರ್ಗ 1 ಮತ್ತು 2 ಅh=101+400 ರಿಂದ 303+100 LHS to RHS ಸುರಂಗ ಪ್ರದೇಶದಲ್ಲಿ ಗುಡ್ಡದ ಮೇಲಿನಿಂದ ಬಂಡೆಗಲ್ಲುಗಳು ರಸ್ತೆಗೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜೀವದ ಸುರಕ್ಷತೆಯ ಹಿತದೃಷ್ಠಿಯಿಂದ ಕಾರವಾರದಿಂದ ಅಂಕೋಲಾಗೆ ಸಾಗುವ ಎಡಭಾಗದ ಸುರಂಗದ (ಅh=ಅh=106.900 ರಿಂದ 108.600) ಮೂಲಕ ಹಾದು ಹೋಗುವ ಎಲ್ಲಾ ತರಹದ ವಾಹನಗಳ ಸಂಚಾರ ಹಾಗೂ ಸಾರ್ವಜನಿಕರ ಸಂಚಾರವನ್ನು 2025-26 ನೇ ಸಾಲಿನ ಮಳೆಗಾಲ ಮುಕ್ತಾಯವಾಗುವವರೆಗೆ ನಿಷೇಧಿಸಿದೆ ಹಾಗೂ ಪರ್ಯಾಯವಾಗಿ ಕಾರವಾರದಿಂದ ಅಂಕೋಲಾಗೆ ಬಲಭಾಗದ ಸುರಂಗದಿಂದ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೋಟಾರು ವಾಹನಗಳ ನಿಯಮ 1989 ರ ನಿಯಮ 221ಎ(5)ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

*************

ಸದಾಶಿವಗಡ ಗುಡ್ಡದ ಕೆಳಗೆ ಹಾದು ಹೋಗುವ ಹೆದ್ದಾರಿಯಲ್ಲಿ ಸಂಚಾರ ನಿಷೇಧ.

ಕಾರವಾರ; ಕಾರವಾರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರ ಜೀವದ ಸುರಕ್ಷತೆಯ ಹಿತದೃಷ್ಠಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ತಡೆಯುವ ದೃಷ್ಠಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಕಾಳಿ ಬ್ರಿಡ್ಜ್ ಹತ್ತಿರದ ಸದಾಶಿವಗಡ ಗುಡ್ಡದ ಕೆಳಗಿನಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರ ಹಾಗೂ ಸಾರ್ವಜನಿಕರ ಸಂಚಾರವನ್ನು 2025-26 ನೇ ಸಾಲಿನ ಮಳೆಗಾಲ ಮುಕ್ತಾಯವಾಗುವವರೆಗೆ ನಿಷೇಧಿಸಿ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ-66 ರ ಸದಾಶಿವಗಡದಿಂದ ಲಿಂಕ್ ರೋಡ ಲೋಟಸ್ ಹೋಟೆಲ್ ಮುಂಭಾಗದ ಕಾರವಾರ ಗೋವಾ ಮಾರ್ಗದ ಮೂಲಕ ಸಂಚಾರಿಸಲು ಪಥ ಬದಲಾವಣೆ ಮಾಡಲಾಗಿದ್ದು ಮೋಟಾರು ವಾಹನಗಳ ನಿಯಮ 1989 ರ ನಿಯಮ 221ಎ(5)ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

************

ಯುಪಿಎಸ್ಸಿ/ಐ.ಎ.ಎಸ್ ಪರೀಕ್ಷೆ ಗೆ ತರಬೇತಿ : ಅರ್ಜಿ ಆಹ್ವಾನ

ಕಾರವಾರ; ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ಪ್ರತಿಷ್ಠಿತ ಸಂಸ್ಥೆಯ ಮೂಲಕ UPSC ಮತ್ತು IAS ಪರೀಕ್ಷಾ ಪೂರ್ವ ತರಬೇತಿ ನಿಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸದರಿ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ಕುಟುಂಬದ ವಾರ್ಷಿಕ ವರಮಾನ ರೂ.8 ಲಕ್ಷ ಮೀರಿರಬಾರದು, ವಯಸ್ಸು ಕನಿಷ್ಠ 21 ಹಾಗೂ ಗರಿಷ್ಠ 35 ವರ್ಷಗಳು ಮೀರಿರಬಾರದು. ಅಭ್ಯರ್ಥಿಯು ಕಳೆದ 3 ವರ್ಷದಲ್ಲಿ ಕನಿಷ್ಠ ಒಂದು ಬಾರಿಯಾದರು UPS/IAS ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖಾ ವೆಬ್‌ಸೈಟ್ https://dom.karnataka.gov.in/ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ: 08382-220336 ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ ಸಂ: 8277799990 ನ್ನು ಸಂಪರ್ಕಿಸುವAತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

************

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆೆ ತರಬೇತಿ

ಕಾರವಾರ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಜೂ.30 ರೊಳಗಾಗಿ ಬೆಳಗ್ಗೆ 10 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

**********

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.

ಕಾರವಾರ; ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP)ಯಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.1 ಲಕ್ಷ ಒಳಗಿರಬೇಕು. ಕಳೆದ ವರ್ಷದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿದ್ದಲ್ಲಿ ಎಂದು ಪರಿಗಣಿಸಲಾಗುವುದು, ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.
ಕಡ್ಡಾಯವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ ಜೋಡಣೆಯಾಗಿದೆಯೇ ಎಂದು ಖಚಿತ ಪಡಿಸಿಕೊಳ್ಳತಕ್ಕದ್ದು, ಅರ್ಜಿ ಸಲ್ಲಿಸಲು ಎಸ್.ಎಸ್.ಪಿ ಪೂರ್ಟಲ್ https://ssp.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಎಸ್.ಎಸ್.ಪಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣಿ: 8277799990ಗೆ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!