Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು.
ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು.
ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.