PSI Suspended; ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರ ದೂರು ಆಲಿಸದೇ, ಫ್‌ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತುಗೊಂಡಿದ್ದಾರೆ.

ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು ಆಗಿದ್ದು, ಅಮಾನತು ಮಾಡಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.

ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು. ಈ ವೇಳೆ ಕೇಸ್ ದಾಖಲಿಸದೇ ಬಿಟ್ಟು ಕಳ್ಸಿದ್ದ ಪಿಎಸ್‌ಐ. ಘಟನೆ ಕುರಿತು ಮೇಲಾಧಿಕಾರಿಗಳ‌ ಗಮನಕ್ಕೆ ತರದೇ ಬೇಜವಾಬ್ದಾರಿ ತೋರಿದ್ದ ಆರೋಪ, ಗಡಿಪಾರಾದ ರೌಡಿ ಶೀಟರ್ ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆಯನ್ನ ಕೂಡ ಪಿಎಸ್ಐ ಬಿಟ್ಟು ಕಳ್ಸಿದ್ದರು . ಹೀಗಾಗಿ, ಎಲ್ಲ ಅಂಶಗಳನ್ನ ಪರಿಗಣಿಸಿ ಎಸ್ಪಿ ಅಮಾನತು ಆದೇಶ ಮಾಡಿದ್ದಾರೆ.

ಜುಲೈ 3ರಂದು ಇಂಗಳಿ ಚಲೋ ಕರೆ ಕೊಟ್ಟಿರುವ ಶ್ರೀರಾಮ ಸೇನೆ ಸಂಘಟನೆ. ಆದ್ರೆ, ಪ್ರತಿಭಟನೆಗೂ ಮುನ್ನ ಪಿಎಸ್‌ಐ ಅಮಾನತು ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ👉 ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!

error: Content is protected !!