Robbery Case;
ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ ಖದೀಮರು, ಒಟ್ಟು 53,31,20,450 ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿದ್ದರು. ಬ್ಯಾಂಕಿನಲ್ಲಿನ ಸಿಸಿ ಕ್ಯಾಮೆರಾ, ಎನ್ ವಿ ಆರ್ ಸಹ ತಗೆದುಕೊಂಡು ಹೋಗಿದ್ದರು.

ಈಗ ಇದೇ ತನಿಖೆ ಮುಂದುವರೆಸಿ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ. 39.26 ಕೋಟಿ ಮೌಲ್ಯದ್ದು ವಶಕ್ಕೆ ಪಡೆಯಲಾಗಿದೆ.
ಒಟ್ಟು 8 ತಂಡಗಳಿಂದ ಕಾರ್ಯಚಾರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ ಎಂದು ಐಜಿಪಿ ಚೇತನ ಸಿಂಗ್ ರಾಥೋರ್ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸ‌ನಿರ್ವಹಿಸ್ತಿದ್ದ. ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38) ಹಾಗೂ ಹುಬ್ಬಳ್ಳಿಯ ಚಾಲುಕ್ಯ ನಗರದ ಸುನೀಲ ತಂದೆ ನಂರಸಿಂಹಲು ಮೋಕಾ(40) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿತರಿಂದ ಕೃತ್ಯಕ್ಕೆ ಬಳಸಿದ 02 ಕಾರುಗಳು ಹಾಗೂ ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10 ಕೋಟಿ 75 ಲಕ್ಷ ರೂ. ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಂದಹಾಗೆ, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ದರೋಡೆ ಪ್ರಕರಣ ಪೊಲೀಸರಿಗೂ ಸವಾಲಾಗಿತ್ತು. ಅವತ್ತು, ಮೇ 23 ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ ಒಳಹೊಕ್ಕು, ಬ್ಯಾಂಕ್ ಸೇಫ್ ಲಾಕರ್ ರೂಮ್‌ನ ಗಿಲ್‌ನ ಸರಳುಗಳನ್ನು ಕಟ್ ಮಾಡಿ ಬೆಂಡ್ ಮಾಡಿ ಒಳ ಹೊಕ್ಕು, ಲಾಕರ್‌ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ (58,976.94 ಗ್ರಾಂ.) ಬಂಗಾರದ ಆಭರಣಗಳು ಹಾಗೂ ನಗದು ಹಣ ರೂ. 5,20,450/-ಹೀಗೆ ಒಟ್ಟು 53,31,20,450/- ಕೋಟಿ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು,

ಅಲ್ಲದೇ ತಮ್ಮ ಗುರುತು ಪತ್ತೆ ಆಗದಂತೆ ಬ್ಯಾಂಕಿನಲ್ಲಿರುವ ಸಿ.ಸಿ.ಟಿ.ವ್ಹಿ ಕ್ಯಾಮೆರಾಗಳ ಎನ್.ವಿ.ಆರ್ ಸಹ ತೆಗೆದುಕೊಂಡು ಹೋಗಿದ್ದರು. ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಮತ್ತು ರಾಮನಗೌಡ ಹಟ್ಟಿ ರವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಟಿ.ಎಸ್.ಸುಲ್ಪಿ, ಸುನೀಲ ಕಾಂಬಳೆ, ಬಲ್ಲಪ್ಪ ನಂದಗಾವಿ, ಸಿಪಿಐ ರವರುಗಳಾದ ರಮೇಶ ಅವಜಿ, ಗುರುಶಾಂತ ದಾಶ್ಯಾಳ, ಅಶೋಕ ಚವ್ಹಾಣ, ಪಿಎಸ್‌ಐ ರವರುಗಳಾದ ಶ್ರೀಕಾಂತ ಕಾಂಬಳೆ, ಅಶೋಕ ನಾಯಕ, ದೇವರಾಜ ಉಳ್ಳಾಗಡ್ಡಿ, ಬಸವರಾಜ ತಿಪ್ಪರೆಡ್ಡಿ, ರಾಕೇಶ ಬಗಲಿ, ಸೊಮೇಶ ಗೆಜ್ಜಿ, ವಿನೋದ ದೊಡಮನಿ, ವಿನೋದ ಪೂಜಾರಿ, ಶಿವಾನಂದ ಪಾಟೀಲ, ಯತೀಶ ಕೆ, ಶ್ರೀಮತಿ ನಾಗರತ್ನ ಉಪ್ಪಲದಿನ್ನಿ ಹಾಗೂ ಹಲವಾರು ಸಿಬ್ಬಂದಿ ಗಳನ್ನೊಳಗೊಂಡ 08 ವಿಶೇಷ ತಂಡಗಳನ್ನು ಆರೋಪಿತರ ಪತ್ತೆ ಕುರಿತು ರಚಿಸಲಾಗಿತ್ತು.

ಈ ಪ್ರಕರಣದಲ್ಲಿನ ಆರೋಪಿತರು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೇ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಕೂಡಾ, 08 ತಂಡಗಳ ಅಧಿಕಾರಿ ಮತ್ತು ಸಿಬ್ಬಂದಿಯವರು ವೈಜ್ಞಾನಿಕ ರೀತಿಯಿಂದ ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಪ್ರಕರಣದಲ್ಲಿ ಭಾಗಿಯಾಗಿದ್ದ ಮೂರು ಜನ ಆರೋಪಿತರ‌ನ್ನು ಹೆಡೆಮುರಿ ಕಟ್ಟಿದ್ದಾರೆ.

error: Content is protected !!