Congress News; ಶಿರಸಿ: ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಮತ್ತು ಎಲ್ಲಾ ಸಚಿವರು ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಹೇಳಿದರು.

ಅವರು ಶುಕ್ರವಾರ ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ಸರ್ಕಾರದ ಎರಡು ವರ್ಷಗಳ ಸಾಧನೆ, ಅಭಿವೃದ್ದಿ ಕಾರ್ಯಕ್ರಮಗಳು ಮತ್ತು ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಆರ್ಥಿಕ ಸಮಸ್ಯೆಯಿಂದ ಅನೇಕ ಮಹಿಳೆಯರು ಸಂಸಾರ ನಡೆಸಲು ಹರಸಾಹಸ ಪಡುತ್ತಿದ್ದು, ಅಂತಹವರಿಗೆ ನೆರವು ನೀಡಿ, ಆರ್ಥಿಕವಾಗಿ ಸಬಲರನ್ನಾಗಿಸಲು ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಯಜಮಾನಿಯ ಖಾತೆಗೆ ನೇರವಾಗಿ 2000 ಹಣ ವರ್ಗಾವಣೆಯಾಗುತ್ತಿದ್ದು, ಇಡೀ ರಾಜ್ಯದಲ್ಲಿ 1.20 ಕೋಟಿಗೂ ಅಧಿಕ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಯಾರೂ ಕೂಡ ಹಸಿವಿನಿಂದ ಬಳಲಬಾರದೆಂದು ಅನ್ನಭಾಗ್ಯ ಯೋಜನೆ ಜಾರಿಗೆ ತಂದು 5 ಕೆ.ಜಿ ನೀಡುತ್ತಿದ್ದ ಅಕ್ಕಿಯನ್ನು 10 ಕೆ.ಜಿ ಏರಿಸಿ ಹಸಿವು ಮುಕ್ತ ರಾಜ್ಯವನ್ನಾಗಿಸಲು ಪ್ರಯಾಣಿಕ ಪ್ರಯತ್ನ ಮಾಡಲಾಗಿದೆ. ರಾಜ್ಯದಲ್ಲಿ ಅನೇಕ ಕುಟುಂಬಗಳಿಗೆ ಕರೆಂಟ್ ಬಿಲ್ ಕಟ್ಟದೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ ಉದಾರಣೆಗಳಿದ್ದು, ರಾತ್ರಿ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಚಣೆ ಉಂಟಾಗುತ್ತಿದ್ದು, ಪ್ರಸ್ತುತ ನಮ್ಮ ಸರ್ಕಾರವು ರಾಜ್ಯದ ಜನರಿಗೆ ಗೃಹಜ್ಯೋತಿ ಯೋಜನೆಯ ಮೂಲಕ 200 ಯೂನಿಟ್ ವಿದ್ಯುತ್‌ನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.

ರಾಜ್ಯದ ಎಲ್ಲಾ ಮಹಿಳೆಯರು ವ್ಯಾಪಾರ ವಹಿವಾಟು ಶಿಕ್ಷಣ ಪಡೆಯಲು ಸಂಚಾರ ಮಾಡಲು ಶಕ್ತಿ ಯೋಜನೆಯ ಮೂಲಕ ರಾಜ್ಯಾದ್ಯಂತ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಟ್ಟಿದೆ. ಪೋಷಕರು ಮಕ್ಕಳಿಗೆೆ ವಿದ್ಯಾಭ್ಯಾಸ ಕೊಡಿಸಿದ್ದಾರೆ, ಅದರೆ ಅವರಿಗೆ ಉದ್ಯೋಗ ಸಿಗದೇ ನಿರುದ್ಯೋಗಿಗಳಾಗಿರುವವರ ನೆರವಿಗೆ ಸರ್ಕಾರ ಪದವೀಧರರಿಗೆ ತಿಂಗಳಿಗೆ 3000 ರೂ. ಮತ್ತು ಡಿಪ್ಲೊಮಾ ಹೊಂದಿರುವವರಿಗೆ 1500 ರೂ.ಗಳನ್ನು ಯುವನಿಧಿ ಯೋಜನೆಯ ಮೂಲಕ ನೀಡಲಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನಗಳಿಗೆ ಮಾತ್ರವಲ್ಲದೇ ಇತರೇ ಅಭಿವೃಧ್ದಿ ಕಾರ್ಯಕ್ರಮಗಳಿಗೂ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಕಳೆದ 2 ವರ್ಷದ ಅವಧಿಯಲ್ಲಿ ಸುಮಾರು 300 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಲಾಗಿದೆ ಹಾಗೂ ಪ್ರಸ್ತುತ 50 ಕೋಟಿ ರೂ ಮೊತ್ತದ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಉಪಾಧ್ಯಕ್ಷ ನಾಗರಾಜ್ ಮುರುಡೇಶ್ವರ, ಶಿರಸಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಸುಮಾ ಉಗ್ರಣಕರ, ಉಪ ವಿಭಾಗಾಧಿಕಾರಿ ಕಾವ್ಯರಾಣಿ ಕೆ.ಎಸ್, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ವಾ.ಕ.ರ.ಸಾ ಸಂಸ್ಥೆಯ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಅಮ್ಮಣ್ಣನವರ್ ಮತ್ತಿತರರು ಇದ್ದರು.

error: Content is protected !!