ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!

Heavy Rain Forecast;
ಬೆಂಗಳೂರು :ಉತ್ತರ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ ಕರಾವಳಿ, ಮಲೆನಾಡಿನ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ವೇಗವಾಗಿ ಗಾಳಿಯೂ ಬೀಸಲಿದೆ ಅಂತಾ ಎಚ್ಚರಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜುಲೈ 15ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ 16ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜುಲೈ 17 ರಿಂದ ಜುಲೈ 20 ರವರೆಗೆ ಅತಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡಿಗೂ..!
ದಕ್ಷಿಣ ಒಳನಾಡಿನಲ್ಲಿ ಜುಲೈ 20 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 17 ರಿಂದ ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 20 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಇವುಗಳನ್ನೂ ಓದಿ👇

ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!

 

error: Content is protected !!