Accident News; ಮುಂಡಗೋಡ ತಾಲೂಕಿನ ಸನವಳ್ಳಿ ಪ್ಲಾಟ್ ಹತ್ತಿರ ಕಾರ್ ಹಾಗೂ ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಯಾರು ಅನ್ನೋದು ಇನ್ನೂ ಗುರುತು ಸಿಕ್ಕಿಲ್ಲ. ಸದ್ಯ ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.